ಪಾಲ್ತಾಡಿ ಬಂಬಿಲದ ಪೂರ್ವಿ ಬಿ.ಎಸ್. ಅವರಿಗೆ ಕನಕ ಪುರಸ್ಕಾರ

0

ಸವಣೂರು : ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ದಿನಾಂಕ 02.02.2024ರಂದು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಯ ಉಳ್ಳಾಲ, ಬಂಟ್ವಾಳ, ಮೂಲ್ಯ ಹಾಗು ಗಡಿನಾಡು ಪ್ರದೇಶವಾದ ಮಂಜೇಶ್ವರ, ಕಾಸರಗೋಡು ತಾಲೂಕು ವ್ಯಾಪ್ತಿಯ ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳು, ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾ ವ್ಯಾಪ್ತಿಯ ವಿಶ್ವೇಶ್ವರಯ್ಯ ತಾಂತ್ರಿಕ ಹಾಗೂ ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾನಿಲಯ, ಕಣ್ಣೂರು ವಿಶ್ವವಿದ್ಯಾನಿಲಯ, ಕೇಂದ್ರೀಯ ವಿಶ್ವವಿದ್ಯಾನಿಲಯ ಕಾಸರಗೋಡು ಇಲ್ಲಿನ ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳು, ಸಿಬ್ಬಂದಿಗಳು ಅಲ್ಲದೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರ ಸಾಮುದಾಯಿಕ ಪಾಲ್ಗೊಳ್ಳುವಿಕೆಯ ‘ಕನಕ ಕೀರ್ತನ ಗಂಗೋತ್ರಿ’ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮದ ಪ್ರೌಢಶಾಲಾ ವಿಭಾಗದಲ್ಲಿ ಮೂಲತಃ ಪಾಲ್ತಾಡಿ ಗ್ರಾಮದ ಬಂಬಿಲದ ಪೂರ್ವಿ ಬಿ.ಎಸ್. ಅವರು ಪ್ರಥಮ ಸ್ಥಾನ ಪಡೆದು ಕನಕ ಪುರಸ್ಕಾರ ಪ್ರಶಸ್ತಿ ಪಡೆದುಕೊಂಡರು.

ಜೂ.25ರಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್.ಧರ್ಮ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ನಿವೃತ್ತ ಕುಲಸಚಿವರಾದ ಪ್ರೋ.ಚಿನ್ನಪ್ಪ ಗೌಡ,ಡಾ.ನರೇಂದ್ರ ರೈ ದೇರ್ಲ,ಡಾ.ಧನಂಜಯ ಕುಂಬ್ಳೆ,ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ಕೆ.ರಾಜು ಮೊಗವೀರ ,ಸಿಂಡಿಕೇಟ್ ಸದಸ್ಯ ರಘುಪತಿ ಕದ್ರಿ ಉಪಸ್ಥಿತರಿದ್ದರು.

ಪೂರ್ವಿ ಬಿ.ಎಸ್.ಅವರು ಮಂಗಳೂರು ಅತ್ತಾವರ ಸರೋಜಿನಿ ಮಧುಸೂಧನ್ ಕುಶೆ ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ. ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿಯ ದ. ಕನ್ನಡ ಜಿಲ್ಲಾ ಅಧ್ಯಕ್ಷರಾದ ಬಿ. ಶೇಷಪ್ಪ ಬಂಬಿಲ ಮತ್ತು ನಾಗರತ್ನ ಕೆ. ಯಸ್ ಈ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here