ಪುತ್ತೂರು: ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಆರಂಭಿಕ ತರಬೇತಿ ಕಾರ್ಯಕ್ರಮ ಗುರುವಾರದಂದು ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತ್ ಸ್ಕೌಟ್ಸ್ and ಗೈಡ್ಸ್ ಲೋಕಲ್ ಅಸೋಸಿಯೇಷನ್ ಕಾರ್ಯದರ್ಶಿ ವಿದ್ಯಾ ಆರ್ ಗೌರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೇಶಪ್ರೇಮವನ್ನು ಬೆಳೆಸಲು ಸ್ಥಾಪಿಸಿದ ಸಂಸ್ಥೆಯೇ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್. ಇದು ಶಿಕ್ಷಣ ವ್ಯವಸ್ಥೆಗೆ ಪೂರಕವಾಗಿರುವ ಚಟುವಟಿಕೆಯಾಗಿದೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆ ಹಾಗೂ ಪ್ರಬುದ್ಧತೆಯನ್ನು ಬೆಳೆಸಲು ಸ್ಕೌಟ್ಸ್ ಮತ್ತು ಗೈಡ್ಸ್ ನೆರವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವವನ್ನು ಬೆಳೆಸುವುದರೊಂದಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುತ್ತದೆ ಎಂದರು.
ಶಿಕ್ಷಕರಿಗೆ ಎಲ್ಲಾ ರೀತಿಯ ಜ್ಞಾನ ಮುಖ್ಯ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಪೂರಕವಾಗಿರುತ್ತವೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ತರಬೇತಿ ನೀಡುವಷ್ಟು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಬೆಳೆಸುತ್ತದೆ. ಸ್ವಾಭಿಮಾನ ಹಾಗೂ ಆತ್ಮಸ್ಥೈರ್ಯವನ್ನು ನೀಡುತ್ತದೆ. ಧೈರ್ಯ, ಸಮಯಪ್ರಜ್ಞೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತದೆ ಎಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಸಂಚಾಲಕಿ ಗಂಗಮ್ಮ ಎಚ್ ಶಾಸ್ತ್ರಿ ತಿಳಿಸಿದರು.
ವೇದಿಕೆಯಲ್ಲಿ ಜಿಲ್ಲಾ ತರಬೇತುದಾರ ಪ್ರತಿಮ್ ಕುಮಾರ್, ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ಶಿಕ್ಷಕಿ ಪ್ರಫುಲ್ಲ ಕೆ., ಕಾಲೇಜಿನ ಪ್ರಾಂಶುಪಾಲೆ ಡಾ| ಶೋಭಿತ ಸತೀಶ್, ಕಾರ್ಯಕ್ರಮದ ಸಂಯೋಜಕರಾದ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮುರಳೀಕೃಷ್ಣ ಕೆ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕನ್ನಡ ಎಂ.ಎ ಪದವಿಯಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾoಕ್ ಪಡೆದ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಸೌಜನ್ಯ ಬಿ ಎಂ. ಇವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕರು, ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ರಾಧಿಕಾ ಮತ್ತು ತಂಡ ಪ್ರಾರ್ಥಿಸಿ, ಶೋಭಿತ ಸ್ವಾಗತಿಸಿದರು. ಪೂಜಾ ವಂದಿಸಿ, ರಮ್ಯಾ ಎಂ ಕಾರ್ಯಕ್ರಮ ನಿರೂಪಿಸಿದರು.