ಪುತ್ತೂರು: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ಜೈರಾಜ್ ಬಿ. ರೈಯವರು ತಿಳಿಸಿದ್ದಾರೆ.
ಸಂಘದ ಸದಸ್ಯರ ಮಕ್ಕಳಾಗಿದ್ದು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95 ಹಾಗೂ ಅದಕ್ಕಿಂತ ಹೆಚ್ಚು ಅಂಕ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 90 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ 2023-24ನೇ ಸಾಲಿನಲ್ಲಿ ಪಿ.ಯು.ಸಿ ಉತ್ತೀರ್ಣರಾಗಿ, 2024-25ನೇ ಶೈಕ್ಷಣಿಕ ಸಾಲಿನಲ್ಲಿ AIMS/BMC/MMC, ಸರಕಾರಿ ದಂತ ವೈದ್ಯಕೀಯ ಕಾಲೇಜು ಬೆಂಗಳೂರು, IIT/ NITK, National Law School, IIM ನಂತಹ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ವೃತ್ತಿಪರ ಪದವಿ/ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಭಾ ಪುರಸ್ಕಾರದ ಅರ್ಜಿಗಳು ಶ್ರೀ ರಾಮಕೃಷ್ಣ ಕ್ರೆಡಿಟ್ಕೋ-ಓಪರೇಟಿವ್ ಸೊಸೈಟಿಯ ಎಲ್ಲಾ ಶಾಖೆಗಳಲ್ಲಿ ಮತ್ತು ಸಂಘದ ಅಧಿಕೃತ ವೆಬ್ಸೈಟ್ http://ramakrishnacredit.com/ ನಲ್ಲಿಲಭ್ಯವಿದ್ದು ಜು.15, 2024ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸದಸ್ಯರು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.