ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ 2022-23ಮತ್ತು 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಜೂ.20ರಂದು ಸುದ್ದಿ ಕೃಷಿ ಸೇವಾ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿ ಸದಸ್ಯ ದತ್ತಾತ್ರೇಯ ಹೆಗ್ಡೆರವರು ಮಾತನಾಡಿ ರಾಜ್ಯ ಸರಕಾರ ಜಾರಿಗೊಳಿಸಿದ ಪತ್ರಕರ್ತರ ಬಸ್ ಪಾಸ್ ಸೌಲಭ್ಯ ಮತ್ತು ನಿವೇಶನಗಳ ಸೌಲಭ್ಯಗಳ ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಮಾತನಾಡಿ ಸಂಘದ ಎಲ್ಲಾ ಕಾರ್ಯಕ್ರಮಗಳಲ್ಲಿ ಸದಸ್ಯರ ಸಕ್ರಿಯವಾಗಿ ಭಾಗವಹಿಸುವಿಕೆ ಮುಖ್ಯ ಎಂದ ಅವರು ರಾಜ್ಯ ಮತ್ತು ಜಿಲ್ಲಾ ಸಮಿತಿ ವತಿಯಿಂದ ಆಯೋಜಿಸಲಾಗುವ ಕಾರ್ಯಕ್ರಮಗಳ ಮಾಹಿತಿ ನೀಡಿ ಈ ಕಾರ್ಯಕ್ರಮಗಳಲ್ಲಿ ಎಲ್ಲರೂ ಪಾಲ್ಗೊಳ್ಳಿ ಎಂದರು. ಸಂಘದ ಅಧ್ಯಕ್ಷ ತಿಲಕ್ ರೈ ಕುತ್ಯಾಡಿ ಪ್ರಾಸ್ತಾವಿಕ ಮಾತನಾಡಿ ಸಂಘದ ವತಿಯಿಂದ ಕಾರ್ಯಚಟುವಟಿಕೆಗಳ ಮಾಹಿತಿ ನೀಡಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ನೂತನ ಅಧ್ಯಕ್ಷೆ ಶೈಲಜಾ ಸುದೇಶ್ ಮಾತನಾಡಿ ಸಂಘದ ಮುಂದಿನ ಕಾರ್ಯಯೋಜನೆಗಳನ್ನು ತಿಳಿಸಿ ಎಲ್ಲರ ಸಹಕಾರ ಕೋರಿದರು. ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಅಧಿಕಾರ ಹಸ್ತಾಂತರ:
ಸಂಘದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನಿಯೋಜಿತ ಅಧ್ಯಕ್ಷೆ ಶೈಲಜಾ ಸುದೇಶ್ ಚಿಕ್ಕಪುತ್ತೂರು, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಕಾಂತ್ ರೈ ಅನಿಕೂಟೇಲು, ಕೋಶಾಧಿಕಾರಿ ಕವಿತಾ ವಿಶ್ವನಾಥ್ ಕುಂಬ್ರ, ಉಪಾಧ್ಯಕ್ಷ ಪಿ. ಸದಾಶಿವ ಭಟ್, ಜತೆ ಕಾರ್ಯದರ್ಶಿ ದಿಲ್‌ಶಾನ ಶರೀಫ್ ಕುಂಬ್ರ, ಸಂಘಟನಾ ಕಾರ್ಯದರ್ಶಿ ಗೋಪಾಲಕೃಷ್ಣ ಸಂತೋಷ್‌ನಗರರವರಿಗೆ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಹೂ ನೀಡಿ ಸ್ವಾಗತಿಸಿದರು. ಬಳಿಕ ಸಂಘದ ಅಧ್ಯಕ್ಷ ತಿಲಕ್ ರೈ ಕುತ್ಯಾಡಿ ಹಾಗೂ ಪದಾಧಿಕಾರಿಗಳು ಸಂಘದ ಪುಸ್ತಕ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಸಂಘದ ಕೋಶಾಧಿಕಾರಿ ರಕ್ಷಿತಾ ಎಚ್.ನಾಯ್ಕ್ 2022-23 ಮತ್ತು 2023-24ನೇ ಸಾಲಿನ ವರದಿಯನ್ನು ವಾಚಿಸಿ ಲೆಕ್ಕಪತ್ರ ಮಂಡಿಸಿದರು. ರಕ್ಷಿತಾ ಎಚ್. ನಾಯ್ಕ್ ಮತ್ತು ಚಿತ್ರಾಂಗಿಣಿ ಪ್ರಾರ್ಥಿಸಿ ಪ್ರಧಾನ ಕಾರ್ಯದರ್ಶಿ ಶ್ರೀಧರ್ ರೈ ಕೋಡಂಬು ಸ್ವಾಗತಿಸಿದರು. ನೂತನ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಕಾಂತ್ ರೈ ಅನಿಕೂಟೇಲು ವಂದಿಸಿ ಉಪಾಧ್ಯಕ್ಷ ಶರತ್ ಕುಮಾರ್ ಪಾರ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸ್ಥಾಪಕಾಧ್ಯಕ್ಷ ಉಮೇಶ್ ಮಿತ್ತಡ್ಕ, ಜತೆ ಕಾರ್ಯದರ್ಶಿ ಪ್ರಜ್ವಲ್ ಪುತ್ತೂರು, ಮಾಜಿ ಅಧ್ಯಕ್ಷರಾದ ಯೂಸುಫ್ ರೆಂಜಲಾಡಿ, ಸದಾಶಿವ ಶೆಟ್ಟಿ ಮಾರಂಗ, ಸದಸ್ಯರುಗಳಾದ ನರೇಶ್ ಜೈನ್, ರಮೇಶ್ ಕೆಮ್ಮಾಯಿ, ಮಹಮ್ಮದ್ ಪೆರುವಾಯಿ, ಮೋಹನ್ ಶೆಟ್ಟಿ, ಗಂಗಾಧರ್ ನಿಡ್ಪಳ್ಳಿ, ಅಕ್ಷಯ್ ಕಡೆಶಿವಾಲಯ, ಪ್ರೀತಾ, ಜಯಲಕ್ಷ್ಮಿ, ಕಾವ್ಯ, ಶ್ವೇತಾ ಉಪಸ್ಥಿತರಿದ್ದರು.