ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯ, ಪುತ್ತೂರು ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜು.4 ರಂದು ಬೆಳಿಗ್ಗೆ 11.15 ಕ್ಕೆ ನೆಹರೂನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಸುದೇಶ್ ಕುಮಾರ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದು, ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು ಇದರ ಸಂಚಾಲಕರಾದ ವಿಜಯನಾರಾಯಣ ಕೆ. ಎಂ. ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಖ್ಯಾತ ಪತ್ರಕರ್ತರು, ಅಂಕಣಕಾರರು ಆಗಿರುವ ವಿಶ್ವವಾಣಿ ದಿನಪತ್ರಿಕೆಯ ಜಿತೇಂದ್ರ ಕುಂದೇಶ್ವರರವರು ಮಾಧ್ಯಮ ಸಮೂಹ ಮತ್ತು ವಿಶ್ವಾಸಾರ್ಹತೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ಪತ್ರಕರ್ತರ ಸಂಘ, ಪುತ್ತೂರು ಘಟಕದ ಅಧ್ಯಕ್ಷೆ ಶೈಲಜಾ ಸುದೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ.ಕೆ. ರವೀಂದ್ರ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಅಕ್ಷತಾ ಎ. ಪಿ. ಇವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.