ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲುಕು ಇದರ ನೆಲ್ಯಾಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಕೌಕ್ರಾಡಿ ಗ್ರಾಮದ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆ ಮತ್ತು ನೆಲ್ಯಾಡಿ ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಶ್ರಮದಾನ ಮಾಡಲಾಯಿತು.
ಘಟಕದ 16 ಸ್ವಯಂ ಸೇವಕರು ಮತ್ತು ನೆಲ್ಯಾಡಿ ಸೇವಾಪ್ರತಿನಿಧಿ ಹೇಮಾವತಿ ಜೆ. ಅವರು ಶ್ರಮದಾನದಲ್ಲಿ ಭಾಗವಹಿಸಿದ್ದರು.
ಶ್ರಮದಾನದ ಜೊತೆಗೆ ಘಟಕದ ಮಾಸಿಕ ಸಭೆಯನ್ನು ಘಟಕದ ಪ್ರತಿನಿಧಿ ರಮೇಶ್ ಬಾಣಜಾಲು ಇವರ ಅಧ್ಯಕ್ಷತೆಯಲ್ಲಿ ಹೊಸಮಜಲು ಶಾಲೆಯಲ್ಲಿ ನಡೆಸಲಾಯಿತು.
ಸಭೆಯಲ್ಲಿ ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಲೋಕೇಶ್ ಬಾಣಜಾಲು, ಕೌಕ್ರಾಡಿ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಕೆ.ಇ ಅಬೂಬಕ್ಕರ್, ಶಾಲಾ ಮುಖ್ಯಗುರು ಪ್ರೇಮಾ, ದೈಹಿಕ ಶಿಕ್ಷಣ ಶಿಕ್ಷಕ ಆನಂದ ಗೌಡ, ಶಿಕ್ಷಕ ವೃಂದ, ವಲಯ ಮೇಲ್ವಿಚಾರಕ ವಿಜೇಶ್ ಜೈನ್, ಘಟಕ ಸಂಯೋಜಕಿ ನಮಿತಾ ಶೆಟ್ಟಿ, ಘಟಕದ ಸ್ವಯಂ ಸೇವಕರು ಉಪಸ್ಥಿತರಿದ್ದರು.