ಇಂದು ಉಪ್ಪಿನಂಗಡಿಗೆ ಆರೋಗ್ಯ ಸಚಿವರ ಭೇಟಿ

0

ಪುತ್ತೂರು: ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್‌ರವರು ಇಂದು ರಾತ್ರಿ 8 ಗಂಟೆಗೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಮುದಾಯ ಆರೋಗ್ಯ ಕೇಂದ್ರದ ವ್ಯವಸ್ಥೆಯ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ. ಆರೋಗ್ಯ ಕೇಂದ್ರದ ಬೇಡಿಕೆಯ ಬಗ್ಗೆ ಮತ್ತು ಕೇಂದ್ರವನ್ನು ಉನ್ನತೀಕರಿಸುವ ಬಗ್ಗೆ ಕಳೆದ ವಾರ ನಡೆದ ರಕ್ಷಾ ಸಮಿತಿ ಸಭೆಯಲ್ಲಿ ಶಾಸಕರು ತಿಳಿಸಿದ್ದರು. ಇದರ ಬೆನ್ನಲ್ಲೇ ಸಚಿವರು ಭೇಟಿ ನೀಡುತ್ತಿದ್ದು ಸಮುದಾಯ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here