ನೆಲ್ಯಾಡಿ; ಮೆಸ್ಕಾಂನಿಂದ ವಿದ್ಯುತ್ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

0

ನೆಲ್ಯಾಡಿ: ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ-2024ಇದರ ಅಂಗವಾಗಿ ವಿದ್ಯುತ್ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ ಜು.2ರಂದು ನೆಲ್ಯಾಡಿ ಮೆಸ್ಕಾಂ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ನಡೆಯಿತು.


ಮೆಸ್ಕಾಂ ನೆಲ್ಯಾಡಿ ಶಾಖಾ ಜೆಇ ರಮೇಶ್ ಅವರು ವಿದ್ಯುತ್ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು. ಸರಕಾರಿ ಪ್ರೌಢಶಾಲೆ ಕೊಣಾಲು, ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ನೇರ್ಲ ಇಚ್ಲಂಪಾಡಿ, ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ನೆಲ್ಯಾಡಿ ಹಾಗೂ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆ ನೆಲ್ಯಾಡಿಯಲ್ಲಿ ವಿದ್ಯುತ್ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here