ಜು.09: ಪರ್ಪುಂಜ ಹಾಲು ಉತ್ಪಾದಕರ ಸಹಕಾರ ಸಂಘದ  ವಾರ್ಷಿಕ ಸಾಮಾನ್ಯ ಸಭೆ 

0

ಪುತ್ತೂರು: ಪರ್ಪುಂಜ ಹಾಲು ಉತ್ಪಾದಕರ ಸಹಕಾರ ಸಂಘದ  2023-2024ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಜು .09 ರಂದು ಬೆಳಿಗ್ಗೆ 11-00ಕ್ಕೆ ಸರಿಯಾಗಿ ಸಂಘದ ವಠಾರ (ರಾಜ್ ಕಾಂಪ್ಲೆಕ್ಸ್) ಇಲ್ಲಿ ಸಂಘದ ಅಧ್ಯಕ್ಷರಾದ ಬೂಡಿಯಾರು ರಾಧಾಕೃಷ್ಣ ರೈ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಆ ಪ್ರಯುಕ್ತ ಸಂಘದ ಸದಸ್ಯರೆಲ್ಲರೂ ಕ್ಲಪ್ತ ಸಮಯದಲ್ಲಿ ಆಗಮಿಸಿ, ಸಭೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆ ನೀಡಿ ಸಹಕರಿಸಬೇಕಾಗಿ (ಆಡಳಿತ ಮಂಡಳಿ ಅನುಮತಿ ಮೇರೆಗೆ) ಸಂಘದ ಕಾರ್ಯದರ್ಶಿ ಸರೋಜ ಆರ್. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here