ಪುತ್ತೂರು ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ನಡೆಯುವ ಆಟಿ ಹಬ್ಬ , ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಇವುಗಳ ಸಹಯೋಗದಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜೂ.27ರಂದು ನಡೆಯುವ ಆಟಿ ಹಬ್ಬ- 2024 ಮತ್ತು ಆ.16ರಂದು ನಡೆಯುವ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆಯನ್ನು ಜು.7ರಂದು ತೆಂಕಿಲ ಒಕ್ಜಲಿಗ ಗೌಡ ಸಮುದಾಯ ಭವನದಲ್ಲಿ ನಡೆದ ಸಂಘದ ತಿಂಗಳ ಮಾಸಿಕ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.
ಒಕ್ಕಲಿಗ ಗೌಡ ಸಂಘದ ಸಲಹಾ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಶಾಸಕ ಸಂಜೀವ ಮಠಂದರೂ ಅವರು ಆಮಂತ್ರಣ ಪತ್ರ ಬಿಡುಗಡೆ ಮಾಡಿದರು. ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಅಧ್ಯಕ್ಷ ರವಿ ಮುಂಗ್ಲಿಮನೆ, ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಬೆಳ್ಯಪ್ಪ ಗೌಡ, ಯುವ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ, ಸಂಘದ ಪದಾಧಿಕಾರಿಗಳಾದ ಶಿವರಾಮ ಗೌಡ ಮತಾವು ಸಹಿತ ಹಲವು ಮಂದಿ ಈ ಸಂದರ್ಭ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here