ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವನಮಹೋತ್ಸವ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಜು.10 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ಕಾಲೇಜಿನ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ವನಮಹೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕ ಮಹದೇವ ಶಾಸ್ತ್ರಿ, ಸದಸ್ಯರಾದ ಶ್ರೀ ರವಿ ಮುಂಗ್ಲಿಮನೆ, ಪ್ರಾಂಶುಪಾಲರು, ಸಿಬ್ಬಂದಿವರ್ಗ ಹಾಗು ಅಂತಿಮ ವರ್ಷದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದರು.ಈ ಸಂದರ್ಭದಲ್ಲಿ ಕಂಪ್ಯೂಟರ್ ಸೈನ್ಸನ ವಿದ್ಯಾರ್ಥಿ ಪ್ರಜ್ವಲ್ ಕುಮಾರ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸ್ಥಾಪನಾ‌ ದಿನದ ಮಹತ್ವವನ್ನು ತಿಳಿಸಿದರು.

LEAVE A REPLY

Please enter your comment!
Please enter your name here