ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ಅಳಕೆಮಜಲು ನಿವಾಸಿ ಲೀಲಾವತಿ, ಇಡ್ಕಿದು ನಿವಾಸಿ ವರ್ಷಿಣಿರವರಿಗೆ ವ್ಹೀಲ್ ಚೇರ್ ವಿತರಿಸಲಾಯಿತು.
ಮಾಣಿ ವಲಯದ ಜನಜಾಗೃತಿ ವಲಯಾಧ್ಯಕ್ಷರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಅಳಕೆಮಜಲು ಒಕ್ಕೂಟದ ಅಧ್ಯಕ್ಷರಾದ ಚಂದ್ರಹಾಸ ನಾಯ್ಕ, ಇಡ್ಕಿದು ಒಕ್ಕೂಟದ ಉಪಾಧ್ಯಕ್ಷರಾದ ಸತೀಶ್ ಆಚಾರ್ಯ, ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಸುಗಂಧಿನಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.