ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಯ ಯೋಜನೆ- ಅನುಮೋದನೆ ನೀಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

0

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಈಗಾಗಲೇ ಪ್ಲಾನಿಂಗ್ ( ನೀಲಿ ನಕಾಶೆ) ಯನ್ನು ತಯಾರು ಮಾಡಿದ್ದು ಅದರ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಮುಜರಾಯಿ ಇಲಾಖೆಗೆ ಕಳುಹಿಸಲಾಗಿದೆ. ಈ ಮಾಸ್ಟರ್ ಪ್ಲಾನ್‌ಗೆ ಅನುಮೋದನೆ ನೀಡುವಂತೆ ಶಾಸಕ ಅಶೋಕ್ ರೈಯವರು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಅವರ ಕಚೇರಿಯಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಐತಿಹಾಸಿಕವಾದ ದೇವಸ್ಥಾನವಾಗಿದೆ. ಇಲ್ಲಿಗೆ ಪ್ರತೀ ದಿನ ಸಾವಿರಾರು ಭಕ್ತರು ಭೇಟಿ ಕೊಡುತ್ತಾರೆ ಮತ್ತು ವಿಶೇಷ ದಿನಗಳಲ್ಲಿ ಭಕ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಇಲ್ಲಿ ಮೂಲಭೂತ ಸೌಕರ್ಯದ ಕೊರತೆ ಇದೆ. ಈ ಪ್ರಸಿದ್ದ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ನಿಟ್ಟಿನಲ್ಲಿ ಈಗಾಗಲೇ ಪ್ಲಾನಿಂಗ್ ತಯಾರಿಸಲಾಗಿದೆ. ಈ ಪ್ಲಾನಿಂಗ್ ಪ್ರಕಾರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಮೂಲಕ ಭಕ್ತ ಸಮೂಹಕ್ಕೆ ಸೂಕ್ತ ವ್ಯವಸ್ಥೆಯನ್ನು ಕಲ್ಪಸಿಕೊಡಬೇಕಿದೆ. ಈಗಾಗಲೇ ಪ್ಲಾನಿಂಗ್ ನ್ನು ಇಲಾಖೆಗೆ ಅನುಮೋದನೆಗೆ ಕಳುಹಿಸಲಾಗಿದ್ದು ಶೀಘ್ರವೇ ಅನುಮೋದನೆಯನ್ನು ನೀಡಬೇಕೆಂದು ಸಚಿವರಿಗೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here