ಜು.13:ಫಿಲೋಮಿನಾ ಗಣೇಶೋತ್ಸವದ ಪೂರ್ವಭಾವಿ ಸಭೆ

0

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗೊಳಪಟ್ಟ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಹಾಗೂ ಹಿರಿಯ ವಿದ್ಯಾರ್ಥಿಗಳು ನಡೆಸಲ್ಪಡುವ 42ನೇ ವರ್ಷದ ಗಣೇಶೋತ್ಸವದ ಪೂರ್ವಭಾವಿ ಸಭೆಯು ಜು.13 ರಂದು ಮುಕ್ರಂಪಾಡಿ ಬಳಿ ಅಪರಾಹ್ನ ಜರಗಲಿದೆ.

ಈ ಸಭೆಯಲ್ಲಿ ಗಣೇಶೋತ್ಸವದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುವುದು. ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿ ಮಿತ್ರರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹಿರಿಯ ವಿದ್ಯಾರ್ಥಿ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಮುಕ್ರಂಪಾಡಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here