ಪುತ್ತೂರು: ಪುತ್ತೂರಿನ ಎಪಿಎಂಸಿ ರಸ್ತೆಯ ಮಣಾಯಿ ಆರ್ಚ್ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 10ನೇ ಶಾಖೆಯು ಜು.13ರಂದು ವಿಟ್ಲದಲ್ಲಿರುವ ಎಂಪೈರ್ ಮಹಲ್ನಲ್ಲಿ ಉದ್ಘಾಟನೆಗೊಳ್ಳಲಿದೆ.
ಶಾಖೆಯನ್ನು ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಸಿ, ಆಶೀರ್ವಚನ ನೀಡಲಿದ್ದಾರೆ. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್ ರಮೇಶ್, ವಿಟ್ಲ ಪಟ್ಟಣ ಪಂಚಾಯತ್ನ ಸದಸ್ಯ ಜಯಂತ ಪಿ. ಹೆಚ್, ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ತಾಲೂಕು ಅಧ್ಯಕ್ಷ ರವಿ ಮುಂಗ್ಲಿಮನೆ, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಮೋನಪ್ಪ ಗೌಡ ಶಿವಾಜಿನಗರ, ಎಂಪೈರ್ ಮಹಲ್ನ ಮಾಲಕ ಪೀಟರ್ ಪ್ರಾನ್ಸಿಸ್ ಲಾಸ್ರಾದೋ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.