ಸಂತ ಫಿಲೋಮಿನಾ ಹಿ.ಪ್ರಾ.ಶಾಲಾ ಸಭಾಂಗಣದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಶಿಕ್ಷಕರಿಗೆ ಮಾಹಿತಿ ಕಾರ್ಯಗಾರ

0

ಪುತ್ತೂರು: ಜು.11ರಂದು ಸಂತ ಫಿಲೋಮಿನಾ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಶಿಕ್ಷಕರಿಗೆ ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎನ್ ಪ್ರಕಾಶ್, ಮಾನಸಿಕ ಚಿಕಿತ್ಸಾ ಸಲಹೆಗಾರರು ಮತ್ತು ವೇಣು ಗೋಪಾಲ್ ನಿವೃತ್ತ ಬ್ಯಾಂಕ್ ಉದ್ಯೋಗಿ ಇವರು ಭಾಗವಹಿಸಿದರು. ಜೊತೆಗೆ ಶಾಲಾ ಮುಖ್ಯೋಪಾಧ್ಯಾಯನಿ ಭಗಿನಿ ಲೋರ ಪಾಯಸ್ ರವರು ಹಾಗೂ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ವಿವೇಕ ಆಳ್ವರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಾಲಾ ಶಿಕ್ಷಕ ವೃಂದದ ಪ್ರಾರ್ಥನೆಯ ಮೂಲಕ ಕಾರ್ಯಗಾರಕ್ಕೆ ಚಾಲನೆ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯನಿ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ಸ್ವಾಗತಿಸಿದರು.
ತದ ನಂತರ ಎನ್.ಪ್ರಕಾಶ್ ಶಿಕ್ಷಕ – ವಿದ್ಯಾರ್ಥಿ ಹಾಗೂ ಪೋಷಕರ ನಡುವಿನ ಸಂಬಂಧ, ಶಿಕ್ಷಕರು ತರಗತಿಯಲ್ಲಿ ಎದುರಿಸುವ ಸವಾಲುಗಳು ಹಾಗೂ ಬಗೆಹರಿಸುವ ವಿಧಾನ, ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹೊಂದುತ್ತಿರುವ ಮಾನಸಿಕ ಒತ್ತಡ, ಪಾಠ ಬೋಧಿಸುವಾಗ ಅನುಸರಿಸಬೇಕಾದ ವಿಧಾನಗಳು, ವಿದ್ಯಾರ್ಥಿಗಳ ಏಕಾಗ್ರತೆಯನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದರ ಜೊತೆಗೆ ಸಮಸ್ಯಾತ್ಮಕ ಪೋಷಕರನ್ನು ಯಶಸ್ವಿಯಾಗಿ ಎದುರಿಸುವ ವಿಧಾನ ಎಂಬ ಈ ಎಲ್ಲಾ ವಿಷಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದ ಜೊತೆಗೆ ಇತರ ಶಾಲೆಗಳ ಶಿಕ್ಷಕರು ಕೂಡ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.
ಕಾರ್ಯಕ್ರಮದ ನಿರ್ವಹಣೆ ಹಾಗೂ ವಂದನಾರ್ಪಣೆಯನ್ನು ಶಾಲಾ ಸಹ ಶಿಕ್ಷಕಿ ಜಾಸ್ಮಿನ್ ಗೋವಿಯಸ್ ರವರು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here