





ಸವಣೂರು: ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಬಾಲ್ಯವಿವಾಹ ನಿಷೇಧ ಮತ್ತು ಪೋಕ್ಸೋ ಕಾಯಿದೆ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.



ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಪ್ರವೀಣ್ ಬಂಬಿಲ ದೋಳ ಮಾತನಾಡಿ, ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಸಾಮಾನ್ಯ ಜ್ಞಾನ ಬೆಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದರು. ಮುಖ್ಯ ಅತಿಥಿ ಕಡಬ ತಾಲೂಕು ಜನ ಜಾಗೃತಿ ವೇದಿಕೆಯ ಅಧ್ಯಕ್ಷ, ನ್ಯಾಯವಾದಿ ಮಹೇಶ್ ಕೆ.ಸವಣೂರು ಮಾತನಾಡಿ, ಸಮಸ್ಯೆ ಗಳು ಉಂಟಾದಾಗ ಭಯಪಡದೆ ಕಾನೂನು ಮೂಲಕ ಪರಿಹಾರ ಪಡೆದುಕೊಳ್ಳುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಎಂಬ ವ್ಯಾಸ್ತವನ್ನು ಯಾರು ಮರೆಯಬಾರದು ಎಂದರು.





ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪದ್ಮಾವತಿ ಎನ್.ಪಿ.ಅವರು ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರಾದ ವಿದ್ಯಾಧರ ರೈ ಉಪಸ್ಥಿತರಿದ್ದರು. ಉಪನ್ಯಾಸಕರಾದ ಹರಿಶಂಕರ ಸ್ವಾಗತಿಸಿ,ರಾಜೀವ ಶೆಟ್ಟಿ ವಂದಿಸಿದರು.









