ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾ| ಘಟಕ-ಸಂಚಾಲಕ-ಕುಂಬ್ರ ದುರ್ಗಾಪ್ರಸಾದ್ ರೈ, ಸಹಸಂಚಾಲಕ- ಸಾಜ ರಾಧಾಕೃಷ್ಣ ಆಳ್ವ

0

ಪುತ್ತೂರು: ಬಂಟರ ಯಾನೆ ನಾಡವರ ಮಾತೃಸಂಘದ ಪುತ್ತೂರು ತಾಲೂಕು ಘಟಕದ ನೂತನ ಸಂಚಾಲಕರಾಗಿ ವಕೀಲ ಕುಂಬ್ರ ದುರ್ಗಾಪ್ರಸಾದ್ ರೈ ಹಾಗೂ ಸಹಸಂಚಾಲಕರಾಗಿ ಮಾಜಿ ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರವರು ಜು. 16 ರಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಬಂಟರ ಯಾನೆ ನಾಡವರ ಮಾತೃಸಂಘದ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿದ ಬಂಟರ ಯಾನೆ ನಾಡವರ ಮಾತೃಸಂಘದ ಪುತ್ತೂರು ತಾಲೂಕು ಘಟಕದ ಕಾರ‍್ಯಕಾರಿ ಸಮಿತಿಯಲ್ಲಿ ನೂತನ ಆಯ್ಕೆ ನಡೆಯಿತು.


ನೂತನ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈಯವರ ಹೆಸರನ್ನು ಮಾತೃ ಸಂಘದ ಪುತ್ತೂರು ಘಟಕದ ನಿಕಟಪೂರ್ವ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು ಮತ್ತು ನೂತನ ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವರವರ ಹೆಸರನ್ನು ಮಾತೃ ಸಂಘದ ಪುತ್ತೂರು ಘಟಕದ ನಿಕಟಪೂರ್ವ ಸಹಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲುರವರು ಸೂಚಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಘಟಕದ ನಿರ್ದೇಶಕರುಗಳಾದ ಜೈರಾಜ್ ಭಂಡಾರಿ ನೊಣಾಲು ಡಿಂಬ್ರಿ, ವಾಣಿ ಶೆಟ್ಟಿ ನೆಲ್ಯಾಡಿ, ಮಾತೃ ಸಂಘದ ನಿರ್ದೇಶಕ ಹಾಗೂ ಬಂಟರ ಸಂಘದ ಪ್ರಧಾನ ಕಾರ‍್ಯದರ್ಶಿ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.


ನೂತನ ಸಂಚಾಲಕ ಮತ್ತು ಸಹಸಂಚಾಲಕರಿಗೆ ಅಭಿನಂದನೆಗಳು:
ಬಂಟರ ಯಾನೆ ನಾಡವರ ಮಾತೃಸಂಘದ ಪುತ್ತೂರು ತಾಲೂಕು ಘಟಕದ ನೂತನ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ ಮತ್ತು ನೂತನ ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವರವರನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷರಾಗಿರುವ ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ಸವಣೂರು ಕೆ.ಸೀತಾರಾಮ ರೈ, ಅರಿಯಡ್ಕ ಲಕ್ಷ್ಮೀನಾರಾಯಣ ಶೆಟ್ಟಿ, ಬೂಡಿಯಾರ್ ರಾಧಾಕೃಷ್ಣ ರೈ, ನಿಕಟಪೂರ್ವ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಮಾಜಿ ಪ್ರಧಾನ ಕಾರ‍್ಯದರ್ಶಿ ಮೋಹನ್ ರೈ ನರಿಮೊಗರು, ಮಾತೃ ಸಂಘದ ನಿಕಟಪೂರ್ವ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ನಿಕಟಪೂರ್ವ ಸಹಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲು, ಮಾತೃ ಸಂಘದ ನಿರ್ದೇಶಕರುಗಳಾದ ಜೈರಾಜ್ ಭಂಡಾರಿ ನೊಣಾಲು ಡಿಂಬ್ರಿ, ನಿತ್ಯಾನಂದ ಶೆಟ್ಟಿ ಮನವಳಿಕೆ, ವಾಣಿ ಶೆಟ್ಟಿ ನೆಲ್ಯಾಡಿ, ಬಂಟರ ಸಂಘದ ಕೋಶಾಽಕಾರಿ ಸಂತೋಷ್ ಶೆಟ್ಟಿ ಸಾಜರವರುಗಳು ಅಭಿನಂದಿಸಿ, ಗೌರವಿಸಿದರು.


ನೂತನ ಸಂಚಾಲಕರಾಗಿರುವ ಕುಂಬ್ರ ದುರ್ಗಾಪ್ರಸಾದ್ ರೈಯವರು ನ್ಯಾಯವಾದಿವಾಗಿದ್ದು, ತಾಲೂಕು ಬಂಟರ ಸಂಘದ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿರುವ ಇವರು ಜಿಲ್ಲಾ ಯುವ ಕಾಂಗ್ರೆಸ್ ವಕ್ತಾರರಾಗಿ ಜವಾಬ್ದಾರಿ ನಿರ್ವಹಿಸಿದ್ದು, ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ.
ನೂತನ ಸಹಸಂಚಾಲಕರಾಗಿರುವ ಸಾಜ ರಾಧಾಕೃಷ್ಣ ಆಳ್ವರವರು ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದು, ಈ ಹಿಂದೆ ಜಿ.ಪಂ ಹಾಗೂ ತಾ.ಪಂ ಸದಸ್ಯರಾಗಿ ಕಾರ‍್ಯನಿರ್ವಹಿಸಿದ್ದರು. ಪ್ರಸ್ತುತ ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷರಾಗಿರುವ ಇವರು ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here