ಜು.21 : ಸವಣೂರಿನ ಯುವಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಸವಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ,ಕೆ.ವಿ.ಜಿ.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇದರ ಆಶ್ರಯದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸವಣೂರು ವಲಯ ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ,ಸವಣೂರು ಯುವಕ ಮಂಡಲ,ಸಮರ್ಥ ಜನಸೇವಾ ಟ್ರಸ್ಟ್ ಪುಣ್ಚಪ್ಪಾಡಿ ಇದರ ಸಹಕಾರದೊಂದಿಗೆ ಜು 21ರಂದು ಸವಣೂರು ಯುವ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ.

ಸಭಾ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರು ಮತ್ತು ಸುಳ್ಯ ಕೆ.ವಿ.ಜಿ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಕೆ.ವಿ.ಚಿದಾನಂದ ಅವರು ಉದ್ಘಾಟಿಸುವರು.
ಅಧ್ಯಕ್ಷತೆಯನ್ನು ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ.ಸವಣೂರು ವಹಿಸುವರು.ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್‌ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು,ಸವಣೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ,ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ಪುಣ್ಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್‌ನ ಅಧ್ಯಕ್ಷ ಗಿರಿಶಂಕರ ಸುಲಾಯ, ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ.,ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸವಣೂರು ಇದರ ಅಧ್ಯಕ್ಷ ಗೋಪಾಲಕೃಷ್ಣ ಗೌಡ ಆರೇಲ್ತಡಿ ಉಪಸ್ಥಿತರಿರುವರು.

ಆರೋಗ್ಯ ಶಿಬಿರದಲ್ಲಿ ಜನರಲ್ ಮೆಡಿಸಿನ್ ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ, ಮಕ್ಕಳ ರೋಗ ವಿಭಾಗ, ಇ.ಎನ್.ಟಿ ವಿಭಾಗ, ಚರ್ಮ ಮತ್ತು ಲೈಂಗಿಕ ರೋಗ ವಿಭಾಗ, ಸ್ತ್ರೀ ರೋಗ ವಿಭಾಗ, ಎಲುಬು ಮತ್ತು ಕೀಲು,ದಂತ ಚಿಕಿತ್ಸಾ ವಿಭಾಗ, ಶ್ವಾಸಕೋಶ ಮತ್ತು ತುರ್ತು ಚಿಕಿತ್ಸಾ ವಿಭಾಗದಲ್ಲಿ ತಪಾಸಣೆ ನಡೆಯಲಿದೆ.ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here