ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹೆತ್ತವರ ಸಭೆ

0

ಶಿಕ್ಷಣ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ಒದಗಿಸಿಕೊಡಬೇಕು : ಸುಬ್ರಹ್ಮಣ್ಯ ನಟ್ಟೋಜ


ಪುತ್ತೂರು: ಪ್ರತಿಯೊಂದು ವಿಷಯಗಳನ್ನು ಸಮಯಕ್ಕೆ ಸರಿಯಾಗಿ ನಿರ್ವಹಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಅಂತಹ ಜ್ಞಾನವನ್ನು ಶಿಕ್ಷಣ ಒದಗಿಸಿಕೊಡುತ್ತದೆ. ಶಿಕ್ಷಣ ಸಂಸ್ಥೆಗಳು ಮೌಖಿಕ ಸಂಗತಿಗಳೊಂದಿಗೆ ಪ್ರಾಯೋಗಿಕ ವಿಚಾರಗಳನ್ನೂ ತಿಳಿಸಿಕೊಟ್ಟಾಗ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವೆನಿಸುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಶನಿವಾರ ನಡೆದ 2024-25ನೇ ಶೈಕ್ಷಣಿಕ ಸಾಲಿನ ರಕ್ಷಕ – ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇಶಭಕ್ತಿಯನ್ನು ಮಕ್ಕಳಲ್ಲಿ ಒಡಮೂಡಿಸುವ ಹಿನ್ನೆಲೆಯಲ್ಲಿ ಅಂಬಿಕಾ ವಿದ್ಯಾಸಂಸ್ಥೆಗಳು ಸಾಕಷ್ಟು ಕೆಲಸ ಮಾಡುತ್ತಿವೆ. ಪ್ರಸ್ತುತ ವರ್ಷ ಕಾರ್ಗಿಲ್ ವಿಜಯೋತ್ಸವಕ್ಕೆ 25ನೆಯ ವರ್ಷದ ಸಂಭ್ರಮ ತುಂಬಿದೆ. ಈ ಕಾರ್ಯಕ್ರಮವನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ವೈಭವದಿಂದ ಆಚರಿಸಲು ನಿರ್ಧರಿಸಿವೆ. ಶಾಲಾ ಶಿಕ್ಷಣ ಇಲಾಖೆಯು ಸಹ ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉತ್ತಮ ಸ್ಪಂದನ ನೀಡುತ್ತಿದೆ. ಸಾರ್ವಜನಿಕ ವಲಯದಿಂದಲೂ ಅಪಾರ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.


ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷೆ ಸೀಮಾ ನಾಗರಾಜ್ ಉಪಸ್ಥಿತರಿದ್ದರು.
ಶಾಲಾ ಪ್ರಾಂಶುಪಾಲೆ ಮಾಲತಿ ಡಿ ಪಠ್ಯಪೂರಕ ಚಟುವಟಿಕೆಗಳ ಬಗ್ಗೆ, ಪರೀಕ್ಷೆ ಸಂಬಂಧಿತ ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಶಾಲಾ ಸಹ ಶಿಕ್ಷಕಿ ಪ್ರಿಯಾಶ್ರೀ ಕೆ ಎಸ್ ಸ್ವಾಗತಿಸಿದರು. ಶಾಲಾ ಸಹ ಶಿಕ್ಷಕಿ ಕೃತಿಕ ಧನ್ಯವಾದ ಸಲ್ಲಿಸಿದರು. ಶಾಲಾ ಸಹ ಶಿಕ್ಷಕಿ ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here