ಮುಂದುವರಿದ ಮಳೆ ಅಬ್ಬರ- ಪುತ್ತೂರು, ಕಡಬ ಸಹಿತ ಜಿಲ್ಲೆಯ 5 ತಾ|ಗಳ ಶಾಲೆಗಳಿಗೆ ಜು.18ರಂದು ರಜೆ ಘೋಷಣೆ

0

ಪುತ್ತೂರು: ಮಳೆ ಅಬ್ಬರ ಮುಂದುವರಿದಿರುವುದರಿಂದ ದ.ಕ.ಜಿಲ್ಲೆಯ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ಹಾಗೂ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.18ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.

ನಕಲಿ ರಜೆ ಆದೇಶ-ಎಫ್.ಐ.ಆರ್ ದಾಖಲಿಸಲು ಡಿಸಿ ಸೂಚನೆ
ಜು.18ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂಬ ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜು.18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here