ಜು.22: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್‌ ವಿಜಯ – ಯೋಧ ನಮನ

0

ಪುತ್ತೂರು: ಕಾರ್ಗಿಲ್‌ ಯುದ್ಧದಲ್ಲಿ ಭಾರತ ವಿಜಯ ಸಾಧಿಸಿ 25 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್‌ವಿಜಯ – ಯೋಧ ನಮನ ಕಾರ್ಯಕ್ರಮ ಜುಲೈ 22 ರಂದು ಬೆಳಗ್ಗೆ 10.30 ಕ್ಕೆ ಸರಿಯಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಗಿಲ್‌ ಯುದ್ಧದಲ್ಲಿ ಭಾರತದ ಸಶಸ್ತ್ರ ಪಡೆಗಳ ವೀರಗಾಥೆಯನ್ನು ಸ್ಮರಿಸುತ್ತಾ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರ ಯೋಧರಿಗೆ ಈ ಸಂದರ್ಭದಲ್ಲಿ ನಮನ ಸಲ್ಲಿಸಲಾಗುವುದು.

ಶೌರ್ಯ ಪ್ರಶಸ್ತಿ ಪುರಸ್ಕ್ರತ ಯೋಧ ಕ್ಯಾಪ್ಟನ್‌ ಎಂ. ವಿ. ಪ್ರಾಂಜಲ್‌, ಪೋಷಕರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಕಾರ್ಯದರ್ಶಿಗಳಾದ ಡಾ. ಕೆ. ಎಂ. ಕೃಷ್ಣ ಭಟ್‌ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನ ಅಭ್ಯಾಗತರಾಗಿ ಮರಣೋತ್ತರ ಶೌರ್ಯ ಚಕ್ರ ಪುರಸ್ಕೃತ ಯೋಧ ಕ್ಯಾಪ್ಟನ್‌ ಎಂ. ವಿ. ಪ್ರಾಂಜಲ್‌ ಪೋಷಕರಾದ ಶ್ರೀ ಎಂ. ವೆಂಕಟೇಶ್‌ ಹಾಗೂ ಅನುರಾಧಾ ವೆಂಕಟೇಶ್‌ ಅವರು ಭಾಗವಹಿಸಲಿದ್ದಾರೆ. ಕಾರ್ಕಳದ ಖ್ಯಾತ ವಾಗ್ಮಿ ಶ್ರೀಕಾಂತ್‌ ಶೆಟ್ಟಿ ಪ್ರಧಾನ ವಕ್ತಾರರಾಗಿ ಆಗಮಿಸಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರವೀಂದ್ರ ಪಿ. ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಯೋಧ ನಮನ
ಈ ಸಂದರ್ಭದಲ್ಲಿ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧರಿಗೆ ವಿಶೇಷ ಗೌರವ ಸಲ್ಲಿಸಲಾಗುವುದು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯರು, ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here