ಜು.26: ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಯೋಧ ನಮನ 2024

0

ಪುತ್ತೂರು: ಕಾರ್ಗಿಲ್ ವಿಜಯ ದಿವಸ ಇದರ 25ನೇ ವರ್ಷಾಚರಣೆ ಅಂಗವಾಗಿ ಯೋಧ ನಮನ ಕಾರ್ಯಕ್ರಮವನ್ನು ಜು.26ರಂದು ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಜಂಟಿ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ಆಯೋಜಿಸಲಾಗಿದೆ.


ಈ ಕಾರ್ಯಕ್ರಮಕ್ಕೆ ಪ್ರಧಾನ ಅಭ್ಯಾಗತರಾಗಿ ಲೆಪ್ಟಿನೆಂಟ್ ಕರ್ನಲ್ ಶ್ರೀ ಅಶೋಕ್ ಕಿಣಿ.ಎಚ್ (SM, VSM) Former Comptroller to Bharat Ratna Dr.APJ Abdul Kalam Former Advisor to Minister of State Defense ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಪುಣಚ ಶ್ರೀದೇವಿ ವಿದ್ಯಾಕೇಂದ್ರದ ಅಧ್ಯಕ್ಷ ಜಯಶ್ಯಾಮ ನೀರ್ಕಜೆ ವಹಿಸಲಿದ್ದು ಕಾರ್ಯಕ್ರಮದಲ್ಲಿ ಭಾರತೀಯ ಸೈನ್ಯದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಹಾಗೂ ಪ್ರಸುತ್ತ ಸೇವೆ ಸಲ್ಲಿಸುತ್ತಿರುವ ನಮ್ಮ ಸಂಸ್ಥೆಗಳ ಮಕ್ಕಳ ಪೋಷಕರನ್ನು ಗುರುತಿಸಿ, ಗೌರವಾರ್ಪಣೆ ಮಾಡಲಾಗುವುದು. ಮಾತ್ರವಲ್ಲದೆ ಕಾರ್ಯಕ್ರಮದಲ್ಲಿ ಕಲರ್ಸ್ ಕನ್ನಡ ಖ್ಯಾತಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ರಿ ಪುರಸ್ಕೃತ ತುಳುನಾಡ ಗಾನ ಗಂಧರ್ವ ಬಿರುದಾಂಕಿತ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ದೇಶ ಭಕ್ತಿ ಗಾನ ಸುಧೆ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿವೇಕಾನಂದ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರಾಷ್ಟ್ರಪತಿ ಕೀರ್ತಿಶೇಷ – ಎ.ಪಿ.ಜೆ ಅಬ್ದುಲ್ ಕಲಾಂ ನೆನಪು
ಕಾರ್ಗಿಲ್ ವಿಜಯ ದಿವಸ ಇದರ 25ನೇ ವರ್ಷಾಚರಣೆ ಅಂಗವಾಗಿ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಜು.25ರಂದು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಪುತ್ತೂರು ಇದರ ಸುವರ್ಣಮಹೋತ್ಸವ ಸಭಾಭವನದಲ್ಲಿ ನಡೆಯಿಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಪುತ್ತೂರು ಇದರ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಶ್ರೀಪತಿ ಕಲ್ಲೂರಾಯ ವಹಿಸಲಿದ್ದು, ಅಭ್ಯಾಗತರಾಗಿ ಲೆಪ್ಟಿನೆಂಟ್ ಕರ್ನಲ್ ಅಶೋಕ್ ಕಿಣಿ.ಎಚ್ (SM, VSM) Former Comptroller to Bharat Ratna Dr.APJ Abdul Kalam Former Advisor to Minister of State Defenseಮತ್ತು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಪುತ್ತೂರು ಇದರ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ ಮುರಳಿಕೃಷ್ಣ.ಕೆ.ಎನ್ ಆಗಮಿಸಲಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾರ್ಗಿಲ್ ವಿಜಯೋತ್ಸವದ ಬೆಳ್ಳಿನೆನಪು
ಕಾರ್ಗಿಲ್ ವಿಜಯ ದಿವಸ ಇದರ 25ನೇ ವರ್ಷಾಚರಣೆ ಅಂಗವಾಗಿ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಜು.26ರಂದು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಪುತ್ತೂರು ಇದರ ಸುವರ್ಣಮಹೋತ್ಸವ ಸಭಾಭವನದಲ್ಲಿ ನಡೆಯಿಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಕಾರ್ಯದರ್ಶಿ ಡಾ.ಕೃಷ್ಣ ಭಟ್.ಕೆ.ಎಂ ವಹಿಸಲಿದ್ದು, ಅಭ್ಯಾಗತರಾಗಿ ಲೆಪ್ಟಿನೆಂಟ್ ಕರ್ನಲ್ ಅಶೋಕ್ ಕಿಣಿ.ಎಚ್ (SM, VSM) Former Comptroller to Bharat Ratna Dr.APJ Abdul Kalam Former Advisor to Minister of State Defense ಮತ್ತು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಪುತ್ತೂರು ಇದರ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಶ್ರೀಪತಿ ಕಲ್ಲೂರಾಯ ಮತ್ತು ಸಂಚಾಲಕರಾದ ಶ್ರೀ ಮುರಳಿಕೃಷ್ಣ.ಕೆ.ಎನ್ ಆಗಮಿಸಲಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


LEAVE A REPLY

Please enter your comment!
Please enter your name here