ಪುತ್ತೂರು: ಪ್ರಾಥಮಿಕ ಆರೋಗ್ಯ ಕೇಂದ್ರ ಸರ್ವೆ, ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ, ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ ಕಲ್ಲಮ ಇವುಗಳ ನೇತೃತ್ವದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ಮಧುಮೇಹ, ರಕ್ತದೊತ್ತಡ ಮತ್ತು ಹಿಮೋಗ್ಲೋಬಿನ್ ಪರೀಕ್ಷೆ ಕಲ್ಲಮ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯಿತು.
ಮುಂಡೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಚಂದ್ರಶೇಖರ ಎನ್.ಎಸ್.ಡಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ರಕ್ಷಾ ಕಲಾ ಕೌಶಲ್ಯ ಕೇಂದ್ರ ಪುತ್ತೂರು ಇದರ ಸಂಸ್ಥಾಪಕ ಶ್ರೀನಿವಾಸ್ ಹೆಚ್.ಬಿ ಸಭಾಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಮುಂಡೂರು ಗ್ರಾ.ಪಂ ಸದಸ್ಯ ಕಮಲೇಶ್ ಎಸ್.ವಿ, ಎಲ್.ಐ.ಸಿ ಚೀಫ್ ಅಡ್ವೈಸರ್ ಜಿ.ಕೆ ಪ್ರಸನ್ನ, ನರಿಮೊಗರು ಪ್ರಸಾದಿನಿ ಆಯುರ್ನಿಕೇತನದ ವೈದ್ಯ ರಾಘವೇಂದ್ರ ಪ್ರಸಾದ್, ರೋಟರಿ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್, ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಮಿತಾ ನಾಯ್ಕ್, 65 ಬಾರಿ ರಕ್ತದಾನ ಮಾಡಿ ರಕ್ತದಾನಿಗಳಿಗೆ ಸ್ಪೂರ್ತಿಯಾಗಿರುವ ಬಿ.ಟಿ ಮಹೇಶ್ಚಂದ್ರ ಸಾಲ್ಯಾನ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಮನೋಜ್ ಸುವರ್ಣ ಸೊರಕೆ ಪ್ರಾರ್ಥಿಸಿದರು. ಗುರು ರಾಘವೇಂದ್ರ ಮಠ ಕಲ್ಲಮ ಇದರ ವ್ಯವಸ್ಥಾಪಕ ಡಾ. ಸೀತಾರಾಮ ಭಟ್ ಸ್ವಾಗತಿಸಿದರು. ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಗೌತಮ್‌ರಾಜ್ ಕರುಂಬಾರು ವಂದಿಸಿದರು. ಷಣ್ಮುಖ ಯುವಕ ಮಂಡಲದ ಕಾರ್ಯಕಾರಿ ಸಮಿತಿಯ ಸಂಚಾಲಕ ರಾಮಣ್ಣ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.