ಪೆರುವಾಜೆ : ಬಿಜೆಪಿ ಯುವ ಮುಖಂಡ ದಿ. ಪ್ರವೀಣ್ ನೆಟ್ಟಾರು-ಸ್ಮೃತಿ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್

0

ಬೆಳ್ಳಾರೆ : ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಸುಳ್ಯ ಮಂಡಲ ಹಾಗೂ ಸೇವಾ ಭಾರತೀ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ ಇದರ ಸಹಯೋಗದಲ್ಲಿ ಬಿಜೆಪಿ ಯುವ ಮುಖಂಡ ದಿ. ಪ್ರವೀಣ್ ನೆಟ್ಟಾರು-ಸ್ಮೃತಿ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್ ನ ಅಂಗವಾಗಿ ರಕ್ತದಾನ ಶಿಬಿರ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಜೆ.ಡಿ. ಅಡಿಟೋರಿಯಂ ಪೆರುವಾಜೆ-ಬೆಳ್ಳಾರೆಯಲ್ಲಿ ನಡೆಯಿತು.ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿದರು.ಭಾ. ಜ. ಪಾ. ಯುವ ಮೋರ್ಚ ಸುಳ್ಯ ಮಂಡಲದ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಅಧ್ಯಕ್ಷತೆ ವಹಿಸಿದ್ದರು.

ಭಾ. ಜ. ಪಾ. ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬರ,ಭಾ. ಜ. ಪಾ. ಯುವ ಮೋರ್ಚ ದ.ಕ. ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ (ರಿ), ಸುಳ್ಯ
ಇದರ ಅಧ್ಯಕ್ಷ ಡಾ| ಮನೋಜ್ ಕುಮಾರ್ ಅಡ್ಡಂತಡ್ಕ, ಭಾ. ಜ. ಪಾ. ದ.ಕ. ಜಿಲ್ಲೆ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಬೊಟ್ಯಾಡಿ, ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ,ಕಾರ್ಯದರ್ಶಿ ವಿನಯ್ ಕುಮಾರ್ ಮುಳುಗಾಡು ,ರವೀಂದ್ರ ಶೆಟ್ಟಿ ಉಳಿದೊಟ್ಟು,ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನಾ ,ತಂದೆ ಶೇಖರ್ ಪೂಜಾರಿ, ತಾಯಿ ರತ್ನಾವತಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here