ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದಿಂದ ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

0

ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದವತಿಯಿಂದ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜ ಬಾಂಧವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ‌.


ಸಂಘದ ವಾರ್ಷಿಕ ಮಹಾಸಭೆಯು ಆ.4 ರಂದು ನಡೆಯಲಿದ್ದು ಈ ಸಂದರ್ಭ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.95 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜ ಬಾಂಧವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮ ನಡೆಯಲಿದೆ. ಅರ್ಹ ವಿದ್ಯಾರ್ಥಿಗಳು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿರುವ ಸಂಘದ ಕಚೇರಿಯಲ್ಲಿ ಅರ್ಜಿ ಸಲ್ಲಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ. ಆ.1 ರ ಒಳಗಾಗಿ ತಲುಪಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ: 9448625472, 9448328280 ಅನ್ನು ಸಂಪರ್ಕಿಸಬೇಕಾಗಿ ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here