ಮುಂಡೂರು :ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಮುಂಡೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಪೋಷಕತ್ವದಲ್ಲಿ, ಯುವ ಜನತೆಯನ್ನು ಸಾಹಿತ್ಯ ಲೋಕದತ್ತ ಬರಮಾಡಿಕೊಳ್ಳುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮುಂಡೂರು ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ನಡೆಸುವ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-15 ಕಾರ್ಯಕ್ರಮ ಮುಂಡೂರು ಸಿಎ ಬ್ಯಾಂಕ್ ಸಭಾಂಗಣದಲ್ಲಿ ಜು.27ರಂದು ಬೆಳಿಗ್ಗೆ ಉದ್ಘಾಟನೆಗೊಂಡಿತು.
ಸಭಾಧ್ಯಕ್ಷತೆಯನ್ನು ಸ. ಉ. ಹಿ. ಪ್ರಾ ಶಾಲೆ ಮುಂಡೂರು ಇಲ್ಲಿನ ವಿದ್ಯಾರ್ಥಿನಿ ಕು. ಸಮ್ನ ರವರು ವಹಿಸಿದ್ದರು. ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಎನ್ ಎಸ್ ಡಿ ಸಮಾರಂಭ ಉದ್ಘಾಟಿಸಿದರು.
ವೇದಿಕೆಯಲ್ಲಿ ಮುಂಡೂರು ಸಿಎ ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್, ಮುಂಡೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ, ಗ್ರಾಮ ಉಪಸ್ಥಿತರಿದ್ದರು.
ಸಾಹಿತ್ಯ ಸಂಭ್ರಮದ ಸಂಚಾಲಕ ನಾರಾಯಣ ಕುಂಬ್ರ ನಾರಾಯಣ ಕುಂಬ್ರ ಪ್ರಸ್ತಾವನೆಗೈದರು. ಚಿಗುರೆಲೆ ಸಾಹಿತ್ಯ ಬಳಗದ ಸದಸ್ಯೆ ರಶ್ಮಿತಾ ಸುರೇಶ್ ಜೋಗಿಬೆಟ್ಟು ಸ್ವಾಗತಿಸಿದರು. ಸಭೆಯ ಮೊದಲು ಗ್ರಾಪಂ ಬಳಿಯಿಂದ ಸಭಾಭವನದ ವರೆಗೆ ಆಕರ್ಷಕ ಮೆರವಣಿಗೆ ನಡೆಯಿತು. ಮುಂಡೂರು ಶಾಲಾ ಮಕ್ಕಳು ಭಾಗವಹಿಸಿದ್ದರು.
ಶಿಕ್ಷಕ ಬಶೀರ್ ಮಾಸ್ಟರ್ ಹಾಗೂ ನವ್ಯ ರೆಂಜಲಾಡಿ ಕಾರ್ಯಕ್ರಮ ನಿರೂಪಿಸಿದರು.