ವೀರಮಂಗಲ ಪಿಎಂಶ್ರೀಯಲ್ಲಿ ಮಾಹಿತಿ ಕಾರ್ಯಗಾರ

0

ಪುತ್ತೂರು: ಪಿಎಂಸಿ‌‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ಜು.27ರಂದು ಸಂಭ್ರಮ ಶನಿವಾರ ಪ್ರಯುಕ್ತ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಯಿತು.

ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿಯವರು ಸಂದಭೋಚಿತವಾಗಿ ಮಾತನಾಡಿದರು. ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷೆ ಅನುಪಮ ವಹಿಸಿದ್ದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ಕುಮಾರ್, ವನ ಚಾರಿಟೇಬಲ್ ಟ್ರಸ್ಟ್ ನ ಜೀತ್ ಮಿಲನ್ ರೋಚ್, ಮಿಯಾವಾಕಿ ವನದ ಮಹೇಶ್ ಕುಂಜೂರುಪಂಜ, ಎಸ್ ಡಿ ಎಂ ಸಿ ಉಪಾಧ್ಯಕ್ಷ ರಝಾಕ್, ಸದಸ್ಯರಾದ ಸುರೇಶ್ ಗಂಡಿ, ಸಮೀರ್ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಮುನಾ ಉಪಸ್ಥಿತರಿದ್ದರು.

ಶಾಲಾ ಮುಖ್ಯಗುರು ತಾರಾನಾಥ ಸವಣೂರು ಸ್ವಾಗತಿಸಿ. ಶಾಲಾ ಶಿಕ್ಷಕರಾದ ಹರಿಣಾಕ್ಷಿ, ಶೋಭಾ,ಹೇಮಾವತಿ ಶ್ರೀಲತಾ,ಕವಿತಾ, ಶಿಲ್ಪರಾಣಿ, ಸೌಮ್ಯ, ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಾದ ಸವಿತಾ,ಸಂಚನಾ,ಭವ್ಯ, ಚಂದ್ರಾವತಿ ಅಡುಗೆ ಸಿಬ್ಬಂದಿಗಳು, ತಾಯಂದಿರ ಸಮಿತಿಯ ಸದಸ್ಯರು, ಎಸ್ ಡಿ ಎಂ ಸಿ ಸದಸ್ಯರು, ಊರವರು ಉಪಸ್ಥಿತರಿದ್ದರು. ಮಧ್ಯಾಹ್ನ ಆಟಿದ ತಿನಿಸುಗಳ ಸಹಬೋಜನ ಏರ್ಪಡಿಸಲಾಗಿತ್ತು.

LEAVE A REPLY

Please enter your comment!
Please enter your name here