ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 30 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಅರಿಯಡ್ಕ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಕೌಡಿಚ್ಚಾರು ಅರಿಯಡ್ಕ ಇದರ ನೇತೃತ್ವದಲ್ಲಿ 30ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು.28 ರಂದು ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದಲ್ಲಿ ನಡೆಯಿತು.


ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರು ಹಾಗೂ ಜ್ಯೋತಿಷಿ ಬಾಸ್ಕರ ಬಲ್ಯಾಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಆಶಿಸಿದರು. ವೇದಿಕೆಯಲ್ಲಿ ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ರಾಮದಾಸ್ ರೈ ಮದ್ಲ, ಗೌರವಾಧ್ಯಕ್ಷ ವಾಸು ಪೂಜಾರಿ ಗುಂಡ್ಯಡ್ಕ, ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ್ ರೈ ಕುತ್ಯಾಡಿ ಉಪಸ್ಥಿತರಿದ್ದರು. ಗಣೇಶೊತ್ಸವ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಗೌಡ ಕನ್ನಯ ಸಭಾಧ್ಯಕ್ಷತೆ ವಹಿಸಿದ್ದರು. ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ ಸ್ವಾಗತಿಸಿ, ಶ್ರೀ ಕೃಷ್ಣ ಭಜನಾ ಮಂದಿರದ ಕೋಶಾಧಿಕಾರಿ ತಿಲಕ್ ರೈ ಕುತ್ಯಾಡಿ ವಂದಿಸಿದರು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ಸದಸ್ಯರು ಹಾಗೂ ಕೌಡಿಚ್ಚಾರು ಅಯ್ಯಪ್ಪ ಸೇವಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here