ಸದನದಲ್ಲಿ ತುಳು ಮಾತನಾಡಲು ಅವಕಾಶ – ಸ್ಪೀಕರ್ ಯು.ಟಿ.ಖಾದರ್ ಅವರಿಗೆ ತುಳು ಸಾಹಿತ್ಯ ಅಕಾಡೆಮಿಯಿಂದ ಸನ್ಮಾನ

0

ಮಂಗಳೂರು: ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಮಂಗಳೂರಲ್ಲಿ ಸನ್ಮಾನಿಸಿದರು.

ಖಾದರ್ ಅವರಿಗೆ ಶಾಲು ಹಾಗೂ ಪುಸ್ತಕ ಮತ್ತು ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ರೋಹಿತ್ ಉಳ್ಳಾಲ, ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಶಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here