ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಹಲವೆಡೆ ಅನಾಹುತಗಳು ಸಂಭವಿಸಿವೆ.ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ದ.ಕ.ಜಿಲ್ಲೆಯಾದ್ಯಂತ ಅಂಗನವಾಡಿಯಿಂದ ದ್ವಿತೀಯ ಪಿಯುಸಿ ತನಕ ಶಿಕ್ಷಣ ಸಂಸ್ಥೆಗಳಿಗೆ ಜು.31ರಂದು ರಜೆ ಘೋಷಿಸಲಾಗಿದೆ.
ಮಳೆಯಿಂದ ಪುತ್ತೂರು,ಕಡಬ, ವಿಟ್ಲ,ಸುಳ್ಯ,ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರೀ ಹಾನಿ ಸಂಭವಿಸಿದೆ.ಗುಡ್ಡ ಕುಸಿತದಂತಹ ಘಟನೆಗಳಿಂದ ರಸ್ತೆ ಸಂಚಾರ ಬಂದ್ ಆಗಿದೆ.ಈ ಎಲ್ಲ ಘಟನೆಗಳ ಹಿನ್ನೆಲೆಯಲ್ಲಿ ಅಂಗನವಾಡಿಗಳಿಂದ ಸರಕಾರಿ,ಖಾಸಗಿ,ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ದ್ವಿತೀಯ ಪಿಯುಸಿ ತನಕ ಕಾಲೇಜುಗಳಿಗೆ ಜು.೩೧ರಂದು ರಜೆ ಘೋಷಿಸಿ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ.