ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ-ವಿವೇಕಾನಂದ ಸೆಂಟ್ರಲ್ ಸ್ಕೂಲ್ ಗೆ ಹಲವು ಬಹುಮಾನ

0

ಪುತ್ತೂರು : ಜು.27 ರಂದು ಮಂಗಳೂರು ಶಾರದಾ ವಿದ್ಯಾಲಯ ಇಲ್ಲಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ 32 ನೇ ವರ್ಷದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.

ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ 4ನೇ ತರಗತಿಯ ವಿದ್ಯಾರ್ಥಿನಿ ಸ್ವಸ್ತಿ ಭಟ್ ಎಮ್ ಪ್ರಥಮ ಹಾಗೂ ಏಳನೇ ತರಗತಿಯ ವಿದ್ಯಾರ್ಥಿ ಅಚಿಂತ್ಯ ಶರ್ಮಾ ದ್ವಿತೀಯ ಸ್ಥಾನ, ಕಥಾ ರಚನಾ ಸ್ಪರ್ಧೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಶಾರ್ವರಿ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿಯನ್ನು ತಂದು ಕೊಟ್ಟಿದ್ದಾರೆ.ಇವರಿಗೆ ಸಂಸ್ಕೃತ ಶಿಕ್ಷಕಿ ಜಯಶ್ರೀ ಇವರು ಮಾರ್ಗದರ್ಶನ ನೀಡಿದ್ದಾರೆ ಎಂದು ಶಾಲಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ

LEAVE A REPLY

Please enter your comment!
Please enter your name here