ಪುತ್ತೂರು:ಸರಸ್ವತಿ ವಿದ್ಯಾಕೇಂದ್ರ ಕಡಬ ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ದ.ಕ ಇದರ ವತಿಯಿಂದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಎಸ್. ದ್ವಿತೀಯ ಸ್ಥಾನ ಮತ್ತು ಲಿಖಿತ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ಶುಭ ಹಾರೈಸಿರುತ್ತಾರೆ.