ಕೊಣಾಲು: ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಡಬ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಘಟಕದ ಆಶ್ರಯದಲ್ಲಿ ಕೊಣಾಲು ಸರಕಾರಿ ಪ.ಪೂ.ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೋಳಿತ್ತೊಟ್ಟು ವಲಯದ ಅಧ್ಯಕ್ಷ ಬಾಲಕೃಷ್ಣ ಅಲೆಕ್ಕಿ ಅಧ್ಯಕ್ಷತೆ ವಹಿಸಿದ್ದರು.


ಉಪನ್ಯಾಸಕಿ ಜಲಜ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ಮೈಲೇರಿ ಮಾಹಿತಿ ನೀಡಿದರು. ಕೊಣಾಲು ಪ್ರೌಢಶಾಲಾ ಪ್ರಭಾರ ಮುಖ್ಯಶಿಕ್ಷಕಿ ರಮಣಿ, ಕೊಣಾಲು ಒಕ್ಕೂಟದ ಅಧ್ಯಕ್ಷ ಲಿತಿನ್ ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿ ನೇಮಿರಾಜ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ವಂದಿಸಿದರು. ಮೇಲ್ವಿಚಾರಕಿ ಜಯಶ್ರೀ ನಿರೂಪಿಸಿದರು. ಸೇವಾ ಪ್ರತಿನಿಧಿಗಳಾದ ಪ್ರತಿಮಾ, ಹೇಮಲತಾ ಸಹಕರಿಸಿದರು.

LEAVE A REPLY

Please enter your comment!
Please enter your name here