ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೊಣಾಲು ಗ್ರಾಮದ ಕೋಲ್ಪೆ ಸಮೀಪ ಗುಡ್ಡ ಜರಿದು ಮಣ್ಣು ರಸ್ತೆಗೆ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ವೇಳೆ ಇಲ್ಲಿ ಗುಡ್ಡ ಅಗೆದು ರಸ್ತೆ ನಿರ್ಮಾಣ ಮಾಡಲಾಗಿದೆ. ಈಗ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿ ಗುಡ್ಡ ಜರಿದು ಮಣ್ಣು ಹೆದ್ದಾರಿಗೆ ಬಿದ್ದಿದೆ. ಚತುಷ್ಪಥ ರಸ್ತೆಯಾಗಿರುವುದರಿಂದ ಇಲ್ಲಿ ವಾಹನ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗಲಿಲ್ಲ. ವಾಹನಗಳು ಎಂದಿನಂತೆ ಓಡಾಟ ನಡೆಸಿವೆ.