ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಲಿಂಕ್ ಸಮಗ್ರ ಅಮಲು ಚಿಕಿತ್ಸಾ ಕೇಂದ್ರ, ಬಜಾಲ್, ಮಂಗಳೂರು, ವ್ಯಸನಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಇವರು ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ Anti Drug Cell ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಪ್ರತಿ ವರ್ಷವೂ ಮಾದಕ ಮುಕ್ತ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ವಿವಿಧ ಕಾರ್ಯಕಮವನ್ನು ಸಂಸ್ಥೆಯು ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ಪದವಿ ಪೂರ್ವ ಕಾಲೇಜು ಮಟ್ಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿದೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.