ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತ ಇಬ್ಬರು ಪ್ರಮುಖ ಆರೋಪಿಗಳಾದ ಮುಸ್ತಫಾ ಪೈಚಾರ್ ಹಾಗೂ ರಿಯಾಜ್ ಎಚ್.ವೈ.ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಆ.2ರಂದು ದೋಷಾರೋಪ ಪಟ್ಟಿ ಸಲ್ಲಿಸಿದೆ.
ಸುಳ್ಯ ತಾಲೂಕಿನ ಮುಸ್ತಫಾ ಪೈಚಾರ್ ಪ್ರಕರಣದ ಪ್ರಮುಖ ಸಂಚುಕೋರ. ಕೊಲೆಯ ಬಳಿಕ ಸುಮಾರು 2 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಈತನನ್ನು ಹಾಗೂ ಆತನಿಗೆ ಆಶ್ರಯ ನೀಡಿದ್ದ ಮನಸೂರು ಪಾಷ ನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಳೆದ ಮೇ 10 ರಂದು ಬಂಧಿಸಲಾಗಿತ್ತು. ಮುಸ್ತಾಫ ರಾಜ್ಯದಲ್ಲಿ ಪಿಎಫ್ಐ ಸೇವಾ ತಂಡದ ಮಾಸ್ಟರ್ ತರಬೇತುದಾರನಾಗಿದ್ದ. ಈತ ಈ ತಂಡವನ್ನು ಮುನ್ನಡೆಸುತ್ತಿದ್ದ. ಈತ ಟಾರ್ಗೆಟ್ ಗಳನ್ನು ಗುರುತಿಸಿ, ಹತ್ಯೆಗೆ ಬೇಕಾದ ಪಿತೂರಿ ನಡೆಸುತ್ತಿದ್ದ ಎಂದು ಎನ್ ಐ ಎ ದೋಷರೋಪಣ ಪಟ್ಟಿಯಲ್ಲಿ ಉಲ್ಲೇಖಿಸಿದೆ.
‘ಪ್ರಕರಣದಲ್ಲಿ ಇದುವರೆಗೆ 19 ಆರೋಪಿಗಳನ್ನು. ತನಿಖೆ ವೇಳೆ ಎಚ್.ವೈ.ರಿಯಾಜ್ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ್ದ ಎಂದು ತಿಳಿದು ಬಂದಿತ್ತು. ಆತನನ್ನುಕಳೆದ ಜೂ 3 ರಂದು ಮುಂಬಾಯಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್ ಐಎ ಅದಿಕಾರಿಗಳು ವಶಕ್ಕೆ ಪಡೆದಿದ್ದರು. ‘ ಎಂದು ಎನ್ಐಎ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ ಏಳು ಮಂದಿಯ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಎನ್ಐಎ ತಿಳಿಸಿದೆ.