




ಕಾಣಿಯೂರು: ಸುಳ್ಯ ವಿದಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟ ಕಡಬ, ಸುಳ್ಯ ತಾಲೂಕಿನಲ್ಲಿ ನಿರಂತರ ಮಳೆಯಿಂದ ಹಾನಿಯಾದ ರಸ್ತೆಗಳಿಗೆ ವಿಶೇಷ ಅನುದಾನ ಒದಗಿಸುವಂತೆ ಮತ್ತು ಸುಳ್ಯ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಒದಗಿಸುವಂತೆ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್,ಸಿ, ಮಹಾದೇವಪ್ಪ ಅವರನ್ನು ನಿವಾಸದ ಕಛೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.









