ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉಪ್ಪಿನಂಗಡಿ ಸೈಂಟ್ ಮೇರಿಸ್ ಆ.ಮಾ ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪುಳಿತ್ತಡಿ ಶಾಲೆಯಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉಪ್ಪಿನಂಗಡಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.


ಅಲ್‌ಮಾನ್, ಅನಿಕ್, ಲಿಯಾನ್ ಪ್ರಥಮ ಸ್ಥಾನ ಪಡೆದುಕೊಂಡಿದ್ದು ಸನ್ನಿಧಿ, ಗ್ರೀಷ್ಮ, ಗೌಶಿಲಿ ಮತ್ತು ದ್ವಿತೀಯ ಸ್ಥಾನ ಪಡೆದಿದ್ದಾರೆ. ಎರಡೂ ತಂಡಗಳು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.‌ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಹಾಗೂ ವಾಸಪ್ಪ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ ಎಂದು ಶಾಲಾ ಸಂಚಾಲಕ ಜೆರಾಲ್ಡ್ ಡಿ’ಸೋಜಾ ಮತ್ತು ಮುಖ್ಯಗುರು ಮೀರಾ ಮರ್ಲಿನ್ ರೋಡ್ರಿಗಸ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here