ಸಮಯದ ಸುದುಪಯೋಗದಿಂದ ಉಜ್ವಲ ಭವಿಷ್ಯ- ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅಭಿಮತ

0

ನೆಲ್ಲಿಕಟ್ಟೆ ಅಂಬಿಕಾ ಪದವಿ ವಿದ್ಯಾಲಯದಲ್ಲಿ ಸಿಇಟಿ ಕೋಚಿಂಗ್ ತರಗತಿ ಉದ್ಘಾಟನೆ

ಪುತ್ತೂರು: ಸಿಇಟಿ ಸಂಬಂಧಿತ ಪಠ್ಯಕ್ರಮವು NATA, NDA, NEET, CET ಮುಂತಾದ ಎಲ್ಲಾ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಅಷ್ಟೇ ಅಲ್ಲದೆ ಬಿಎಸ್ಸಿಗೂ ಪೂರಕವಾದ ತಳಪಾಯವನ್ನು ಒದಗಿಸುತ್ತದೆ. ಆದುದರಿಂದ ಈ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ಗಂಭೀರವಾಗಿ ಪರಿಗಣಿಸಿ ನಿಯಮಿತವಾಗಿ ಅಭ್ಯಾಸದಲ್ಲಿ ತೊಡಗಿಸಿಕೊಂಡಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅವರು ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯು ವಿದ್ಯಾರ್ಥಿಗಳ ಸಿಇಟಿ ಕೋಚಿಂಗ್ ತರಗತಿ ಉದ್ಘಾಟಿಸಿ ಮಾತನಾಡಿದರು.


ಮೊಬೈಲ್ ಬಳಕೆಯಿಂದ ದೂರವಿದ್ದು, ಪರೀಕ್ಷೆಗಳಿಗೆ ಸರಿಯಾಗಿ ಹಾಜರಾಗುವುದು ಅಗತ್ಯ. ಸಿಇಟಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದುಕೊಂಡಲ್ಲಿ ತಮ್ಮ ಗುರಿಯತ್ತ ಸಾಗಲು ಸಹಕಾರಿಯಾಗುತ್ತದೆ. ಉನ್ನತ ಶಿಕ್ಷಣದಲ್ಲಿ ಅಂಕ ಗಳಿಕೆ ಮಾಡಿದಲ್ಲಿ ಆಯ್ಕೆಯ ವಿಷಯಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಉಪನ್ಯಾಸಕರ ಮಾರ್ಗದರ್ಶನ ಪಡೆದು ಜ್ಞಾನಾರ್ಜನೆಯನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಕಿವಿಮಾತು ಹೇಳಿದರು.


ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ, ಪ್ರಥಮ ಪಿಯು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಜೀವಶಾಸ್ತ್ರ ಉಪನ್ಯಾಸಕ ವಿಷ್ಣು ಪ್ರದೀಪ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here