ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿಯಲ್ಲಿ ನಡೆದಿದೆ. ಮಾಣಿ ಪಟ್ಲಕೋಡಿ ನಿವಾಸಿ ತಿಲಕ್ ಪೂಜಾರಿ (34 ವ.) ಮೃತಪಟ್ಟವರು.
ತಿಲಕ್ ಪೂಜಾರಿ ಅವಿವಾಹಿತರಾಗಿದ್ದು, ಚಾಲಕ ವೃತ್ತಿ ನಿರ್ವಹಿಸುತ್ತಿದ್ದರು, ಯಾರೂ ಇಲ್ಲದ ವೇಳೆ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.