ಪುತ್ತೂರು:ವಿದ್ಯಾ ಭಾರತಿಯ ವತಿಯಿಂದ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಆ.6ರಂದು ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದೃಶನ ಸುರೇಶ್ ಸರಳಿಕಾನ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಪ್ಪಳಿಗೆ ಅಂಬಿಕಾ ವಿದ್ಯಾಲಯದ ಸಿಬಿಎಸ್ಸಿಯ 8ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ದೃಶನ ಇನ್ಸ್ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ನ ಪುತ್ತೂರು ಶಾಖೆಯ ಮುಖ್ಯಶಿಕ್ಷಕ ನಿತಿನ್ ಎನ್ ಸುವರ್ಣರವರ ಮಾರ್ಗದರ್ಶನದಲ್ಲಿ ಶಿಕ್ಷಕ ಶಿವಪ್ರಸಾದ್ರವರಲ್ಲಿ ದರ್ಬೆ ಕೈಗಾರಿಕಾ ಭವನದ ಹಾಲ್ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಇವರು ಬೆಟ್ಟಂಪಾಡಿ ಗ್ರಾಮದ ಸರಳಿಕಾನ ನಿವಾಸಿ ಬೆಟ್ಟಂಪಾಡಿ ಗ್ರಾ.ಪಂ ಅಧ್ಯಕ್ಷ ವಿದ್ಯಾಶ್ರೀ ಮತ್ತು ಇಂಜಿನಿಯರ್ ಸುರೇಶ್ ದಂಪತಿ ಪುತ್ರಿ.2023-24ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯ ಕಟಾ ವಿಭಾಗದಲ್ಲಿ ಪ್ರಥಮ ಹಾಗೂ ಕುಮಿಟೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದರು.
ಆ.10ರಂದು ಬೆಂಗಳೂರಿನಲ್ಲಿ ರಾಮಮೂರ್ತಿ ನಗರದಲ್ಲಿರುವ ಜೈಗೋಪಾಲ್ ಗರೋಡಿಯ ವಿದ್ಯಾ ಕೇಂದ್ರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.