ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯಲ್ಲಿ ತಾ.ಮಟ್ಟದ ಕರಾಟೆ ಪಂದ್ಯಾಟ

0

ಪುತ್ತೂರು:ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಪುತ್ತೂರು ಹಾಗೂ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯ ಆತಿಥ್ಯದಲ್ಲಿ ಆ.5ರಂದು ತಾಲೂಕು ಮಟ್ಟದ ಕರಾಟೆ ಪಂದ್ಯಾಟವು ಮಾಯಿದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ಜರಗಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಯಿದೇ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ| ಲಾರೆನ್ಸ್ ಮಸ್ಕರೇನ್ಹಸ್ ಮಾತನಾಡಿ, ಹೆಣ್ಣು ಮಕ್ಕಳು ಕೂಡ ಕರಾಟೆ ಕಲಿಯುವುದು ಅತ್ಯವಶ್ಯಕ. ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನು ಕಲಿಯುತ್ತಾರೆ. ಮಾತ್ರವಲ್ಲದೇ ಇತರ ಪಂದ್ಯಾಟದಲ್ಲೂ ಆಸಕ್ತಿ ಬೆಳೆಯುತ್ತದೆ ಎಂದು ಹೇಳಿದರು.
ಪಂದ್ಯಾಟವನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೆಶ್ ಎಸ್. ಆರ್ ಮಾತನಾಡಿ, ಕರಾಟೆಯ ಮಹತ್ವದ ಬಗ್ಗೆ ವಿವರಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಎ.ವಿ ಮತನಾಡಿ ಶುಭಹಾರೈಸಿದರು.


ಮಾಯಿದೇ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ಟ, ಶಿಕ್ಷಣ ಸಂಯೋಜಕ ಹರಿಪ್ರಸಾದ್, ಕ್ಷೇತ್ರ ಸಮನ್ವಯ ಅಧಿಕಾರಿ ನವೀನ್ ಸ್ಟೀಪನ್ ವೇಗಸ್, ಜಿಲ್ಲಾ ಸಂಘದ ಉಪಾಧ್ಯಾಕ್ಷ ಮೋನಪ್ಪ ಎಮ್, ತಾಲ್ಲೂಕು ಸಂಘದ ಉಪಾಧ್ಯಕ್ಷ ಪ್ರವೀಣ ರೈ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮಾಮಾಚ್ಚನ್, ಕರಾಟೆ ಪಂದ್ಯಾಟದ ಪ್ರಧಾನ ತೀರ್ಪುಗಾರ ಟಿ.ಡಿ ಸೆನ್ಸಾಯಿ ತೋಮಸ್, ಕರಾಟೆ ಶಿಕ್ಷಕ ಸುರೇಶ್, ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಕಾರ್ಯದರ್ಶಿ ಸ್ಟ್ಯಾನಿ ಪ್ರವೀಣ್ ಮಸ್ಕರೇನ್ಹಸ್, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಪಿ.ಎಂ ಅಶ್ರಫ್, ಹಿರಿಯ ವಿದ್ಯಾರ್ಥಿ ಸಂಘದ ಇವಾನ್ ಮಸ್ಕರೇನ್ಹಸ್ ಹಾಗೂ ಸಹ ಶಿಕ್ಷಕರ ಸಂಘದ ಅಧ್ಯಕ್ಷರು ಅಬ್ರಾಹಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಾಲಾ ಮುಖ್ಯ ಶಿಕ್ಷಕಿ ರೋಸಲಿನ್ ಲೋಬೊ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮ ವಂದಿಸಿದರು. ಶಿಕ್ಷಕ ಇನಾಸ್ ಗೊನ್ಸಾಲ್ವಿಸ್‌ರವರು ಕಾರ್ಯಕ್ರಮ ನಿರ್ವಹಿಸಿದರು. ಚರ್ಚ್ ಪಾಲನ ಸಮಿತಿಯ ಸದಸ್ಯರು, ರಕ್ಷಕ-ಶಿಕ್ಷಕ ಸಂಘದ ಸಮಿತಿಯ ಸದಸ್ಯರು, ಹೆಣ್ಣಾಕ್ಕಳ ಸುರಕ್ಷಾ ಸಮಿತಿಯ ಸದಸ್ಯರು ಹಾಗೂ ತಾಯಂದಿರ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕ-ಶಿಕ್ಷಕೇತರ ವೃಂದ ಸಹಕರಿಸಿದರು.

LEAVE A REPLY

Please enter your comment!
Please enter your name here