ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಪೋಕ್ಸೋ ಕಾಯ್ದೆ ಹಾಗೂ ಸೈಬರ್ ಕ್ರೈಂ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ಪೋಷಕರ ಸಭೆ ಆ.6ರಂದು ನಡೆಯಿತು.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಕವಿತಾ ಹಾಗೂ ದೇವಿಕಾ ಅವರು ಮಾಹಿತಿ ನೀಡಿದರು. ಬಜತ್ತೂರು ಗ್ರಾ.ಪಂ.ಅಧ್ಯಕ್ಷ ಗಂಗಾಧರ ಪಿ.ಎನ್.ರವರು ಸಂದರ್ಭೋಚಿತವಾಗಿ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷೆ ವಸಂತಲಕ್ಷ್ಮೀ, ಉಪಾಧ್ಯಕ್ಷ ದೇವಪ್ಪ, ಮುಖ್ಯಶಿಕ್ಷಕಿ ವಿದ್ಯಾ ಕೆ.,ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಮಮತಾ ಅವರು ಶಾಲೆಯಿಂದ ಹೊರಗುಳಿದ ಮಕ್ಕಳಿದ್ದರೆ ಮಾಹಿತಿ ನೀಡುವಂತೆ ಹೇಳಿದರು. ಮುಖ್ಯಶಿಕ್ಷಕಿ ವಿದ್ಯಾ ಸ್ವಾಗತಿಸಿದರು. ಶಿಕ್ಷಕಿ ಪುನಂತೇಶ್ವರಿ ವಂದಿಸಿದರು. ಶಿಕ್ಷಕಿ ಮಾಲತಿ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿಯರು ಸಹಕರಿಸಿದರು. ಶಾಲಾ ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.