ಶಟಲ್ ಬ್ಯಾಂಡ್ಮಿಂಟನ್ – ಸುದಾನ ಶಾಲಾ ವಿದ್ಯಾರ್ಥಿನಿಯರು ತಾಲೂಕು ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸ. ಹಿ ಪ್ರಾ ಶಾಲೆ ಕೆಮ್ಮಿಂಜೆ ಇವರ ಆಶ್ರಯದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಶಟಲ್ ಬ್ಯಾಂಡ್ಮಿಂಟನ್ ಪಂದ್ಯಾಟದಲ್ಲಿ ಸುದಾನ ವಸತಿಯುತ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರಾದ ಸಾನ್ವಿ(೯), ಯಶ್ವಿ ಶೆಟ್ಟಿ(೯) ಮತ್ತು ತ್ರಯಾ ಕೃಷ್ಣರಾಜ್(೧೦) ಪ್ರಥಮ ಸ್ಥಾನವನ್ನೂ, ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರಾದ ಹೃತ್ವಿಕಾ ಆರ್ ನಾಕ್(೭), ನಿನಾದ(೭ ) ರವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ತಾಲೂಕು ಮಟ್ಟದ ಶಟಲ್ ಬ್ಯಾಂಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಇವರನ್ನು ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್, ಮುಖ್ಯ ಶಿಕ್ಷಕಿ ಶ್ರೀಮತಿ. ಶೋಭಾನಾಗರಾಜ್ ಮತ್ತು ದೈಹಿಕ ಶಿಕ್ಷಕರು ಅಭಿನಂದಿಸಿ, ಶುಭಹಾರೈಸಿದ್ದಾರೆ.

LEAVE A REPLY

Please enter your comment!
Please enter your name here