ನೆಲ್ಯಾಡಿ ಶ್ರೀರಾಮ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

ನೆಲ್ಯಾಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಇದರ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ ಪ್ರಯುಕ್ತ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದಲ್ಲಿ ನಡೆಯಿತು.

ಶ್ರೀರಾಮ ಶಾಲೆಯ ಕಾರ್ಯದರ್ಶಿ ಮೂಲಚಂದ್ರ ಕಾಂಚನ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಗಣೇಶ್ ಕೈಕುರೆ ಅವರು ದುಶ್ಚಟಗಳಿಂದ ದೂರವಿದ್ದು ನಮ್ಮ ಆರೋಗ್ಯವನ್ನು ನಾವು ಕಾಪಡಿಕೊಳ್ಳಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಶುಭಹಾರೈಸಿದರು.
ಶ್ರೀರಾಮ ವಿದ್ಯಾಲಯದ ಮುಖ್ಯಗುರು ಗಣೇಶ್ ವಾಗ್ಲೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಸದಸ್ಯ ತುಕರಾಮ ರೈ, ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಜೆ., ನೆಲ್ಯಾಡಿ ಒಕ್ಕೂಟದ ಅಧ್ಯಕ್ಷ ಭಾಸ್ಕರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶ್ರೀರಾಮ ವಿದ್ಯಾಲಯದ ಶಿಕ್ಷಕಿ ಕಾವ್ಯ ವಂದಿಸಿದರು. ಸೇವಾಪ್ರತಿನಿಧಿಗಳಾದ ಸುಮನ ಎಸ್., ಹೇಮಾವತಿ ಜೆ ಸಹಕರಿಸಿದರು.

LEAVE A REPLY

Please enter your comment!
Please enter your name here