ಉಪ್ಪಿನಂಗಡಿ ಠಾಣೆಯ ಕುಶಾಲಪ್ಪ ನಾಯ್ಕ ಎಎಸ್‌ಐ ಆಗಿ ಭಡ್ತಿ – ಬೆಳ್ತಂಗಡಿ ಠಾಣೆಗೆ ವರ್ಗಾವಣೆ

0

ನೆಲ್ಯಾಡಿ: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕುಶಾಲಪ್ಪ ನಾಯ್ಕ ಅವರು ಎಎಸ್‌ಐ ಆಗಿ ಭಡ್ತಿ ಹೊಂದಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.
ಕುಶಾಲಪ್ಪ ನಾಯ್ಕ ಅವರು 1996ರಲ್ಲಿ ಮಂಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಸೇರ್ಪಡೆಗೊಂಡಿದ್ದರು. ಬಳಿಕ ಉಪ್ಪಿನಂಗಡಿ, ಪುತ್ತೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, 2016ರಲ್ಲಿ ಹೆಡ್‌ಕಾನ್‌ಸ್ಟೆಬಲ್ ಆಗಿ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡಿದ್ದರು. ಅಲ್ಲಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಆಗಮಿಸಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಅವರಿಗೆ ಎಎಸ್‌ಐ ಆಗಿ ಭಡ್ತಿ ದೊರೆತಿದ್ದು, ಬೆಳ್ತಂಗಡಿ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಮೊಗ್ರು ನಿವಾಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here