





ಪುತ್ತೂರು: ತುಳುನಾಡಿನ ದೈವಾಂಶ ಸಂಭೂತ ವೀರ ಪುರುಷರಾದ ಕೋಟಿ ಚೆನ್ನಯರ ಆರಾಧನಾ ಕ್ಷೇತ್ರವಾಗಿರುವ ಒಳಮೊಗ್ರು ಗ್ರಾಮದ ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದೆರ್ಕಳ ಗರಡಿಯಲ್ಲಿ ನಾಗರ ಪಂಚಮಿ ಆಚರಣೆ ನಡೆಯಿತು. ಅರ್ಚಕ ಪ್ರಕಾಶ ನಕ್ಷತ್ರಿತ್ತಾಯರವರ ನೇತೃತ್ವದಲ್ಲಿ ಬೆಳಿಗ್ಗೆ ಶ್ರೀ ನಾಗದೇವರಿಗೆ ಹಾಲಿನ ಅಭಿಷೇಕ, ಸೀಯಾಳಾಭಿಷೇಕ ನಡೆಯಿತು.


ಗರಡಿ ವಠಾರದ ನೂರಾರು ಮಂದಿ ಭಕ್ತಾಧಿಗಳು ನಾಗದೇವರಿಗೆ ಹಾಲು, ಸೀಯಾಳ ಅರ್ಪಿಸಿದರು. ಈ ಸಂದರ್ಭದಲ್ಲಿ ನೂರಾರು ಮಂದಿ ಭಕ್ತರು ಉಪಸ್ಥಿತರಿದ್ದರು. ಗರಡಿಯ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲು ಭಕ್ತಾಧಿಗಳನ್ನು ಸ್ವಾಗತಿಸಿ,ಪ್ರಸಾದ ನೀಡಿ ಸತ್ಕರಿಸಿದರು.














