ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ

0

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.9ರಂದು ನಾಗರ ಪಂಚಮಿಯ ಅಂಗವಾಗಿ ನಾಗಸನ್ನಿಧಿಯಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯಿತು.

ಬೆಳಿಗ್ಗೆಯಿಂದ ನಾಗನ ಸನ್ನಿಧಿಯಲ್ಲ ಭಕ್ತಾದಿಗಳು ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ, ನಾಗಪೂಜೆ ಸೇವೆಗಳನ್ನು ಸಲ್ಲಿಸಿ ಕೃತಾರ್ಥರಾದರು. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನದ ಆಡಳಿತಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಸದಸ್ಯರು ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here