ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ – ಉಪ್ಪಿನಂಗಡಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

0

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಆ.9ರಂದು ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಶಾಲೆ ಪುತ್ತೂರು ಇವರ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉಪ್ಪಿನಂಗಡಿ ಸೈoಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಥಾನಗಳನ್ನು ಪಡೆದಿದ್ದಾರೆ.

ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಅಲ್ಮನ್ ಮುಝನ್, ಮುಹಮ್ಮದ್ ಅನಿಖ್, ಕ್ಲೇವನ್, ಮುಹಮ್ಮದ್ ಅಯಾನ್ ದ್ವಿತೀಯ ಸ್ಥಾನವನ್ನು ಪಡೆದಿದ್ದು, ಪ್ರೌಢ ವಿಭಾಗದ ವಿದ್ಯಾರ್ಥಿಗಳಾದ ಭವಿತ್, ಮಹಮ್ಮದ್ ಸಲೀಲ್, ಶ್ರೇಯಸ್, ಪವನ್ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಪ್ರೌಢಶಾಲಾ ಎಂಟನೇಯ ವಿಭಾಗದಲ್ಲಿ ಜೂವೆಲ್ ಚಾoಜೆಲ್ ಆಯ್ಕೆಯಾಗಿದ್ದು ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಹಾಗೂ ವಾಸಪ್ಪ ತರಬೇತಿ ನೀಡಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ವಂ.ಫಾ. ಜೆರಾಲ್ಡ್ ಡಿ’ಸೋಜ, ಮುಖ್ಯಗುರು ಮೀರಾ ಮರ್ಲಿನ್ ರೋಡ್ರಿಗಸ್ ಅಭಿನಂಧಿಸಿದ್ದಾರೆ.

LEAVE A REPLY

Please enter your comment!
Please enter your name here